Product Description
೧೯೮೭ರಲ್ಲಿ ‘ಚಿದಂಬರ ರಹಸ್ಯ’ ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಪಡೆದಿರುವ ಶ್ರೀ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ತಂದೆ-ಮಕ್ಕಳಿಬ್ಬರೂ ಪ್ರಶಸ್ತಿ ಗಳಿಸಿದ ವಿಕ್ರಮವನ್ನು ಸೃಷ್ಟಿಸಿದ ಜೋಡಿಯಲ್ಲಿ ಎರಡನೆಯವರು. ತೇಜಸ್ವಿ ಅವರು ಮೂಲತಃ ಸಾಹಿತಿಯಾಗಿದ್ದರೂ, ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತಮ್ಮತನವನ್ನು ಮೆರೆದಿರುವ ವಿಶಿಷ್ಟ ಲೇಖಕರಾಗಿದ್ದಾರೆ. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಮೆರೆದವರು. ಕರ್ನಾಟಕ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರಾಗಿರುವ ಡಾ|| ಎಚ್.ಎಂ. ಮಹೇಶ್ವರಯ್ಯನವರು ಈ ಪುಸ್ತಕದ ಲೇಖಕರು. ಇವರ ಇಬ್ಬರು ವಿದ್ಯಾರ್ಥಿಗಳು ತೇಜಸ್ವಿಯವರನ್ನು ಕುರಿತು ಸಂಶೋಧನೆ ನಡೆಸಿ ಪಿಎಚ್.ಡಿ ಪದವಿ ಗಳಿಸಿದ್ದಾರೆ.