Quantity
Product Description
ನೀವು ಶ್ರದ್ಧೆ ಶ್ರಮಗಳಿಂದ ಅಧ್ಯಯನ ನಡೆಸಿ ರಚಿಸಿರುವ 'ಜಪಾನಿನ ಸಾಹಿತ್ಯ ಚರಿತ್ರೆ' ಕೃತಿಯನ್ನು ಓದಿದೆ. ಯಾವುದೇ ಭಾಷೆಯ ಸಾಹಿತ್ಯ ಚರಿತ್ರೆಯನ್ನು ದಾಖಲಿಸುವಾಗ ನೆಲ, ಭಾಷೆ, ಸಾಹಿತ್ಯ ಕೃತಿಗಳ ಬಗೆಗೆ ಅಭಿಮಾನದಷ್ಟೇ, ಒಂದು ಅಂತರವನ್ನು ಕಾಯ್ದುಕೊಂಡು ರಚಿಸಬೇಕೆನ್ನುವ ಪರಂಪರೆಯನ್ನು ಒಪ್ಪುವವರು ಮಾತ್ರ ಹೀಗೆ ಬರೆಯಲು ಸಾಧ್ಯ. ಒಂದು ಅಂತರವನ್ನು ಕಾಯ್ದುಕೊಳ್ಳದೆ ಚರಿತ್ರೆಯನ್ನು ದಾಖಲಿಸುವ ಕೆಲಸವು ಸದ್ಯದಲ್ಲಿ ಕೆಡುಕಿನ ಬೀಜಗಳನ್ನು ಬಿತ್ತುತ್ತದೆ. ಅಂತರ ಕಾಯ್ದಕೊಳ್ಳದ ಚರಿತ್ರೆಯ ದಾಖಲೀಕರಣ ಪ್ರಕ್ರಿಯೆಯು ಅಕ್ಷರವಂತರು ಬದುಕುತ್ತಿರುವ ಸಮಾಜಕ್ಕೆ ಕೊಡುವ ಕೆಟ್ಟ ಕೊಡುಗೆಯಾಗುತ್ತದೆ. ಎಂದು ಬಲವಾಗಿ ನಂಬಿರುವ ನಿಮ್ಮಂತಹವರು ಸಾಹಿತ್ಯ ಚರಿತ್ರೆಯನ್ನು, ಅದು ನಿರ್ಮಾಣವಾಗಲು ಬುನಾದಿಯಾದ ಭೌಗೋಳಿಕ, ರಾಜಕೀಯ, ಭಾಷಿಕ ಪರಿಸರಗಳನ್ನು ಹೀಗೆ ಕಟ್ಟಿಕೊಟ್ಟಿರುವುದು ಯಥೋಚಿತವಾಗಿದೆ. ಜಪಾನಿನ ನೆಲ ಕೆಡುಕಿನ ಫಲವನ್ನು ಉಂಡಿರುವ ಚರಿತ್ರೆಯನ್ನು ಓದಿದರೆ ಮನುಷ್ಯ ಕುಲ ತಲೆ ತಗ್ಗಿಸುವಂತೆ ಆಗುತ್ತದೆ. ಅಲ್ಲಿನ ನೆಲ, ಜಲ, ಭಾಷೆ, ಸಂಸ್ಕೃತಿ, ಸಾಹಿತ್ಯಗಳ ಬಗೆಗೆ ಅಧ್ಯಯನದಿಂದ ಅಪಾರವಾದ ಪ್ರೀತಿ ಗೌರವಗಳನ್ನು ಬೆಳೆಸಿಕೊಂಡಿರುವ ನಿಮ್ಮಂತಹವರು ಮಾತ್ರ ಸಿಟ್ಟು, ಸೆಡವುಗಳಿಗೆ ಅವಕಾಶವನ್ನು ಕೊಡದೆ, "ಹಿಂದೆ ನಡೆದ ಘಟನೆಯಿದು, ನೋಡಿ" ಎಂದು ದಾಖಲಿಸುವಾಗ ನಿಲ್ಲುವ ನಿರ್ಮಮಕಾರದ ಸ್ಥಿತಿಯನ್ನು ಕಂಡರೆ ಬೆರಗಾಗುತ್ತದೆ. ಜಪಾನಿನ ನೆಲದಲಿ ಕೆಡುಕಿನ ಕಲೆಗಳನ್ನು ಬರೆದವರು ಇಂದು ಜಾಗತಿಕ ಮಟ್ಟದಲ್ಲಿ ಬಲು ಎತ್ತರದಲ್ಲಿ ನಿಂತು ಸಬಲರೆಂದು ಬೀಗಬಹುದು, ಆದರೆ ಚರಿತ್ರೆಯ ಅಧ್ಯಯನ ಅವರು ಬಿದ್ದಿರುವ ಪಾತಾಳವನ್ನು ಕಾಣಿಸುತ್ತಿದೆ. ಆ ದಿನ ಒಂದಷ್ಟು ಕ್ಷಣಗಳು ಕೆಡುಕನ್ನು ಹಿಡಿದು ತಡೆದು ನಿಲ್ಲಿಸಿದ್ದಿದ್ದರೆ ಕಾಲಕ್ಕೊಂದು ಘನತೆ - ಗೌರವಗಳು ಇರುತ್ತಿತ್ತೆಂದು ಅನಿಸುತ್ತದೆ. ಚಿಟ್ಟೆಯೊಂದು ಥಟ್ಟನೆ ಹಾರಿದಷ್ಟು ಕ್ಷಣದಲ್ಲಿ ಎಲ್ಲವೂ ನಡೆದು ಹೋಗಿದೆ. ಅದರ ಚಹರೆಗಳು ಇಂದಿಗೂ ಅಲ್ಲಿ ಉಳಿದಿದೆ. ಆರ್. ದಿಲೀಪ್ ಕುಮಾರ್
Author
G Vijaya Nag
Binding
Soft Bound
Number of Pages
200
Publication Year
2025
Publisher
Srushti Publications
Height
2 CMS
Length
22 CMS
Weight
300 GMS
Width
14 CMS
Language
Kannada