Quantity
Product Description
ಕುಶಾನ ಸಾಮ್ರಾಜ್ಯದ ಕಾನಿಷ್ಕನು ವಾಯವ್ಯ ಭಾರತವನ್ನು ಆಳುತ್ತಿರುವ ಹೊತ್ತಿನಲ್ಲಿ, ಚೀನಾ ದೇಶದಿಂದ ರೋಮ್ ದೇಶದ ತನಕ ಕಾಲ್ನಡಿಗೆಯ ವ್ಯಾಪಾರದ ಹಲವು ದಾರಿಗಳು ಉದ್ಭವಿಸಿದವು. ಈ ಕಾಲದಲ್ಲಿ ವಾಹನವನ್ನು ಬಳಸಿಯೂ ಆ ದಾರಿಯನ್ನು ಸಂಪೂರ್ಣವಾಗಿ ಕ್ರಮಿಸಲು ಅಸಾಧ್ಯವಾಗಿದ್ದರೂ, ಹದಿನೆಂಟು ನೂರು ವರ್ಷಗಳ ಹಿಂದೆ ಭೂಪಟದ ಅರಿವಿಲ್ಲದ ನಮ್ಮ ಹಿರಿಯರು ವ್ಯಾಪಾರದ ದೆಸೆಯಿಂದ ಈ ಕ್ಲಿಷ್ಟ ದಾರಿಯುದ್ದಕ್ಕೂ ಹೆಜ್ಜೆಗುರುತುಗಳನ್ನು ಮೂಡಿಸಿದ್ದಾರೆ. ಸಾವಿರಾರು ಮೈಲುಗಳ ಈ ದಾರಿಯು ಹಲವು ಪರ್ವತ, ಮರುಭೂಮಿ, ನದಿ, ಕೊಳ್ಳ ಕಾಡು, ನಾಡುಗಳನ್ನು ಹಾದು ಹೋಗುತ್ತಿತ್ತು. ಈ ಕಾಲದ ಭೂಪಟದ ದೇಶಗಳಾದ ಚೀನಾ, ಕಝಕಿಸ್ತಾನ್, ಉಜೈಕಿಸ್ತಾನ್, ಅಫಘನಿಸ್ತಾನ್, ಭಾರತ, ಪಾಕಿಸ್ತಾನ್, ಇರಾನ್, ಇರಾಕ್, ಟರ್ಕಿ - ಹೀಗೆ ಹಲವು ದೇಶಗಳನ್ನು ಹಾದು ಹೋಗುವ ಈ ದಾರಿಯು ವ್ಯಾಪಾರದ ಉದ್ದೇಶಕ್ಕಾಗಿ ಸಂಭವಿಸಿದರೂ ಅದಕ್ಕಾಗಿಯೇ ಸೀಮಿತವಾಗಿ ಉಳಿಯಲಿಲ್ಲ. ಧರ್ಮಗಳು, ಭಾಷೆಗಳು, ಲಿಪಿಗಳು, ಕೌಶಲ್ಯಗಳು, ಕಲಾಪ್ರಕಾರಗಳು, ತಂತ್ರಜ್ಞಾನಗಳು ಹೀಗೆ ಹಲವು ವಿದ್ಯಮಾನಗಳು ಈ ದಾರಿಯ ಮೂಲಕ ಅತ್ತಿತ್ತ ಚಲಿಸಿದವು. ಆ ಕಾಲದ ಜನರು ಅವೆಲ್ಲವನ್ನೂ ತಮ್ಮ ಅವಶ್ಯಕತೆಗೆ ತಕ್ಕಂತೆ ಅಳವಡಿಸಿಕೊಂಡು ಹೊಸ ಜಗತ್ತನ್ನು ಸೃಷ್ಟಿಸಿಕೊಳ್ಳುವುದರಲ್ಲಿ ಸಫಲರಾದರು.
ಈ ಕಾದಂಬರಿಯು ಎರಡನೆಯ ಶತಮಾನದ ಏಷ್ಯಾಖಂಡದ ಹಲವು ಚಾರಿತ್ರಿಕ ಸಂಗತಿಗಳನ್ನು ಇಟ್ಟುಕೊಂಡು, ಅಂದಿನ ಯುಗಸಂಘರ್ಷವು ಜನಸಾಮಾನ್ಯರಲ್ಲಿ ತಂದಿರಬಹುದಾದ ಸವಾಲುಗಳನ್ನು ಕಾಲ್ಪನಿಕವಾದ ಕತೆಯ ಮೂಲಕ ನಿಮ್ಮ ಮುಂದಿಡಲು ಪ್ರಯತ್ನಿಸುತ್ತದೆ. ಹಲವು ದೇಶಗಳ ಮತ್ತು ಹಲವು ಧರ್ಮಗಳ ವಿಸ್ತಾರವಾದ ಅಧ್ಯಯನ ಮಾಡಿ ಈ ಕೃತಿಯನ್ನು ಲೇಖಕರು ರಚಿಸಿದ್ದಾರೆ.
Binding
Soft Bound
Author
Vasudhendra
Number of Pages
200
Publisher
Chanda Pusthaka
Publication Year
2024
Height
2 CMS
Length
22 CMS
Weight
500 GMS
Width
14 CMS
Language
Kannada